Please Enter Bible Reference like John 3:16, Gen 1:1-5, etc
Bible Versions
Bible Books
ಕರ್ತನೇ, ನನ್ನನ್ನು ಕಳವಳಪಡಿಸುವವರು ಹೆಚ್ಚಿದ್ದಾರೆ! ನನಗೆ ವಿರೋಧವಾಗಿ ಏಳುವವರು ಅನೇಕರು.
ದೇವರಲ್ಲಿ ಇವನಿಗೆ ಯಾವ ಸಹಾಯವೂ ಇಲ್ಲವೆಂದು ನನ್ನ ವಿಷಯದಲ್ಲಿ ಅನೇಕರು ಹೇಳುತ್ತಾರೆ. ಸೆಲಾ.
ಆದರೆ ಓ ನನ್ನ ಕರ್ತನೇ, ನನಗೆ ಗುರಾಣಿಯೂ ನನ್ನ ಘನವೂ ನನ್ನ ತಲೆ ಎತ್ತುವವನೂ ನೀನೇ.
ನನ್ನ ಧ್ವನಿಯೆತ್ತಿ ಕರ್ತನಿಗೆ ಮೊರೆಯಿಟ್ಟೆನು; ಆತನು ತನ್ನ ಪರಿಶುದ್ಧ ಪರ್ವತದಿಂದ ನನ್ನ ಮೊರೆಯನ್ನು ಕೇಳಿದನು. ಸೆಲಾ.
ಕರ್ತನೇ ನನ್ನನ್ನು ಕಾಪಾಡಿದ್ದರಿಂದ ನಾನು ಮಲಗಿ ನಿದ್ದೆಗೈದು ಎಚ್ಚತ್ತೆನು.
ನನಗೆ ವಿರೋಧವಾಗಿ ಸುತ್ತಲೂ ಮುತ್ತಿದ ಹತ್ತು ಸಾವಿರ ಜನರಿಗೆ ಭಯಪಡೆನು.
ಓ ಕರ್ತನೇ, ಏಳು; ಓ ನನ್ನ ದೇವರೇ, ನನ್ನನ್ನು ರಕ್ಷಿಸು. ನೀನು ನನ್ನ ಶತ್ರುಗಳೆಲ್ಲರ ದವಡೆಯ ಮೇಲೆ ಹೊಡೆದು ಭಕ್ತಿಹೀನರ ಹಲ್ಲುಗಳನ್ನು ಮುರಿದಿದ್ದೀ.
ರಕ್ಷಣೆಯು ಕರ್ತನದೇ; ನಿನ್ನ ಜನರ ಮೇಲೆ ನಿನ್ನ ಆಶೀರ್ವಾದ ಉಂಟು. ಸೆಲಾ.